Sidlaghatta : ಶಿಡ್ಲಘಟ್ಟ ನಗರದ ವಾಸವಿ ರಸ್ತೆಯಲ್ಲಿನ ಶ್ರೀಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದ ಆಶ್ರಯದಲ್ಲಿ ವಾಸವಿ ಕಲ್ಯಾಣ ಮಂಟಪದಲ್ಲಿ ಲೋಕ ಕಲ್ಯಾಣಾರ್ಥ ಶ್ರಾವಣ ನಕ್ಷತ್ರದಲ್ಲಿ ಸಾಮೂಹಿಕ ಶ್ರೀ ಶ್ರೀನಿವಾಸ ಕಲ್ಯಾಣ ಏರ್ಪಡಿಸಲಾಗಿತ್ತು.
ವಿಶೇಷ ಪೂಜೆ ಹೋಮ ಹವನಗಳನ್ನು ನೆರವೇರಿಸಲಾಯಿತು. ನಗರ ಹಾಗೂ ತಾಲ್ಲೂಕಿನ ಹಲವು ಮಂದಿ ದಂಪತಿಗಳು ಹಾಗೂ ಆರ್ಯವೈಶ್ಯ ಮಂಡಳಿ, ವಾಸವಿ ಯುವಜನ ಸಂಘ, ವಾಸವಿ ಮಹಿಳಾ ಮಂಡಳಿ ಸದಸ್ಯರು ಸಕ್ರೀಯವಾಗಿ ಭಾಗವಹಿಸಿದ್ದರು.
ಮಾಜಿ ಶಾಸಕ ಎಂ.ರಾಜಣ್ಣ, ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ, ಸಮಾಜ ಸೇವಕ ಪುಟ್ಟು ಆಂಜಿನಪ್ಪ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.