ಶಿಡ್ಲಘಟ್ಟ ನಗರದ ನಗರಸಭೆ ಕಾರ್ಯಾಲಯದಲ್ಲಿ ನೇರ ಪಾವತಿ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ನಗರಸಭೆಯಿಂದ ಸಮವಸ್ತ್ರ ವಿತರಿಸಿ ನಗರಸಭೆ ಅಧ್ಯಕ್ಷೆ ಸುಮಿತ್ರ ರಮೇಶ್ ಮಾತನಾಡಿದರು.
ನಗರದ ಜನತೆಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರತಿನಿತ್ಯ ದುಡಿಯುವ ಪೌರ ಕಾರ್ಮಿಕರು ತಮ್ಮ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಕೆಲಸ ಮಾಡುವಾಗ ಕಡ್ಡಾಯವಾಗಿ ಸಮವಸ್ತ್ರ ಸೇರಿದಂತೆ ಕೈ ಗವಸು, ಮಾಸ್ಕ್ ಬಳಸಬೇಕು. ನಗರದಾದ್ಯಂತ ಸ್ವಚ್ಚತೆ ಹಾಗೂ ನಗರದ ಅಂದವನ್ನು ಹೆಚ್ಚಿಸುವ ಸಲುವಾಗಿ ಶ್ರಮಿಸುವ ಪೌರಕಾರ್ಮಿಕರು ಸಮವಸ್ತ್ರ ಧರಿಸಿ ಕಾರ್ಯ ನಿರ್ವಹಿಸುವ ಮೂಲಕ ನಗರಸಭೆ ಸಿಬ್ಬಂದಿಯೆನ್ನುವ ಪ್ರತ್ಯೇಕತೆ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್ ಮಾತನಾಡಿ, ನಗರಸಭೆ ಪೌರ ಕಾರ್ಮಿಕರಿಗೆ ಸರ್ಕಾರದಿಂದ ಸಮವಸ್ತ್ರ ನೀಡಲಾಗುತ್ತಿದೆಯಾದರೂ, ನೇರ ಪಾವತಿ ಅಡಿಯಲ್ಲಿ ಕೆಲಸ ಮಾಡುವವರಿಗೆ ನಗರಸಭೆಯಿಂದ ಸಮವಸ್ತ್ರ ವಿತರಿಸಲಾಗುತ್ತಿದೆ. ಪ್ರತಿಯೊಬ್ಬರೂ ಸಮವಸ್ತ್ರ ಧರಿಸಿ ಕಾರ್ಯ ನಿರ್ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಪಿ.ಕೆ.ಕಿಷನ್, ಕೆ.ಬಿ.ಮಂಜುನಾಥ, ಎಸ್.ಎಂ.ರಮೇಶ್, ಅಕ್ರಮ್, ಆಸೀಫ್, ಪೌರ ಸೇವಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಮುರಳಿ, ಸಹಾಯಕ ಅಭಿಯಂತರ ರಘುನಾಥ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta