ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಕೀಲರ ಸಂಘದ ಸಹಯೋಗದಲ್ಲಿ ನಡೆಸಿದ “ಕೋಟ್ಪಾ -2003” ರ ಕಾಯ್ದೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ತಂಬಾಕು ನಿಂಯತ್ರಣ ಘಟಕದ ಮಂಜುನಾಥ್ ಮಾತನಾಡಿದರು.
ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ, ತಂಬಾಕು ಉತ್ಪನ್ನಗಳ ಸೇವನೆ, ಉತ್ಪಾದನೆ ಮತ್ತು ಪೂರೈಕೆಯನ್ನು ಕಡಿಮೆ ಮಾಡುವುದು. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ(ಕೋಟ್ಪಾ)2003 ರನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವುದು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ನಗರದ ವಿವಿಧ ಅಂಗಡಿ ಮುಂಗಟ್ಟುಗಳು, ಶಾಲಾ ಕಾಲೇಜುಗಳ ಬಳಿ ಅಂಗಡಿ ಮಾಲೀಕರಿಗೆ “ಕೋಟ್ಪಾ -2003” ರ ಕಾಯ್ದೆ ಕುರಿತು ವಿವರಿಸಿದ್ದೇವೆ. ತಂಬಾಕು ನಿಯಂತ್ರಣ ಕಾಯ್ದೆ ಅನ್ವಯ ಯಾವುದೇ ಶಾಲೆ, ಕಾಲೇಜು ಶಿಕ್ಷಣ ಸಂಸ್ಥೆ ಆವರಣದಿಂದ 100 ಗಜ ಅಂತರದಲ್ಲಿ ಸಿಗರೇಟ್, ಬೀಡಿ ಅಥವಾ ಇತರೆ ಯಾವುದೇ ಬಗೆಯ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದ್ದು, ಉಲ್ಲಂಘನೆಯಾದಲ್ಲಿ ಅದು ಶಿಕ್ಷಾರ್ಹ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಕ್ರಮ ವಹಿಸಬೇಕು ಎಂದು ಹೇಳಿದರು.
ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ದೇವರಾಜು, ಕೀರ್ತಿ, ರುಚಿತ, ಹಿನಾ ಹಾಜರಿದ್ದರು.