ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ತಮ್ಮ ನಿವಾಸದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉದ್ಯೋಗಿನಿ ಯೋಜನೆಯಡಿ ಆರು ಮಂದಿ ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತಿರುವ ಸಾಲ ಸೌಲಭ್ಯಗಳನ್ನು ಬಳಸಿಕೊಂಡು ಮಹಿಳೆಯರು ಆರ್ಥಿಕವಾಗಿ ಪ್ರಗತಿ ಹೊಂದಬೇಕು ಎಂದು ಅವರು ಹೇಳಿದರು.
ಸರ್ಕಾರದ ವಿವಿಧ ಸವಲತ್ತುಗಳನ್ನು ಪಡೆದುಕೊಂಡು ಆರ್ಥಿಕ ಅಭಿವೃದ್ದಿ ಹೊಂದಿದ ಮಹಿಳೆಯರು ಮತ್ತಷ್ಟು ಮಹಿಳೆಯರಿಗೆ ದಾರಿ ತೋರಿಸುವಂತಾಗಬೇಕು. ಉದ್ಯೋಗಿನಿ ಯೋಜನೆಯಡಿ ಪಡೆದ ಸಾಲವನ್ನು ನಿಗಧಿತ ಉದ್ದೇಶಕ್ಕೆ ಬಳಸಿಕೊಳ್ಳುವ ಮೂಲಕ ಸ್ವಯಂ ಉದ್ಯೋಗ ಕೈಗೊಂಡು ಮಹಿಳೆಯರು ಆರ್ಥಿಕವಾಗಿ ಅಭಿವೃದ್ದಿ ಹೊಂದುತ್ತಿರುವುದು ಸಂತಸ ತಂದಿದೆ ಎಂದರು.
ಈ ಸಂದರ್ಭದಲ್ಲಿ ಎಸಿಡಿಪಿಓ ಮಹೇಶ್, ಸಿಬ್ಬಂದಿ ಮಮತ, ಶೋಭ, ಎಲ್ ಮಧು, ಗಿರೀಶ್ ನಾಯಕ್, ಅಣ್ಣಯ್ಯಪ್ಪ, ಚಿದಾನಂದ ಹಾಜರಿದ್ದರು.