Home News ಒಳ ಚರಂಡಿ ನಿರ್ಮಾಣಕ್ಕೆ 38.47 ಕೋಟಿ ರೂ ಹಣ ಬಿಡುಗಡೆ

ಒಳ ಚರಂಡಿ ನಿರ್ಮಾಣಕ್ಕೆ 38.47 ಕೋಟಿ ರೂ ಹಣ ಬಿಡುಗಡೆ

0
Sidlaghatta Underground Drainage System Grant Release

Sidlaghatta : ಶಿಡ್ಲಘಟ್ಟ ನಗರದಲ್ಲಿ ಒಳ ಚರಂಡಿ ನಿರ್ಮಾಣಕ್ಕೆ ಒಟ್ಟು 72 ಕೋಟಿ ರೂಗಳ ಕ್ರಿಯಾ ಯೋಜನೆ ತಯಾರಿಸಿದ್ದು, ಸರ್ಕಾರದಿಂದ ಮೊದಲನೇ ಹಂತದಲ್ಲಿ 38.47 ಕೋಟಿ ರೂ ಹಣ ಬಿಡುಗಡೆಯಾಗಿದೆ. ನಗರದಲ್ಲಿನ 12,700 ಮನೆಗಳಿಗೂ ಒಳಚರಂಡಿ ಸಂಪರ್ಕ ಕಲ್ಪಿಸಲಾಗುವುದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ನಗರ ಹೊರವಲಯದಲ್ಲಿರುವ ಒಳಚರಂಡಿ ತ್ಯಾಜ್ಯ ನೀರಿನ ಶುದ್ದೀಕರಣ ಘಟಕಕ್ಕೆ ಶುಕ್ರವಾರ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ನಗರದಲ್ಲಿ ಎರಡನೇ ಹಂತದ ಒಳಚರಂಡಿ ಕಾಮಗಾರಿ ಪ್ರಾರಂಭಿಸಲು, ಅನುದಾನ ಬಿಡುಗಡೆಯಾಗಿದೆ. ಕಾಮಗಾರಿ ಪ್ರಾರಂಭಿಸಲು ರೂಪರೇಷಗಳು ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ನಗರಸಭೆ ತಾಂತ್ರಿಕ ಸಿಬ್ಬಂದಿ ಒಳಗೊಂಡಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ.

ನಮ್ಮ ರಾಜ್ಯದಲ್ಲಿ ಶಿವಮೊಗ್ಗ ನಗರದಲ್ಲಿ ಒಳಚರಂಡಿ ಕಾಮಗಾರಿಯು ಮಾದರಿಯಾಗಿದೆ. ಅಲ್ಲಿಗೆ ಮೂರೂ ಇಲಾಖೆಗಳ ಅಧಿಕಾರಿಗಳು ಹೋಗಿ ಅಧ್ಯಯನ ಮಾಡಿ, ಸಮನ್ವಯತೆಯಿಂದ ಶಿಡ್ಲಘಟ್ಟದಲ್ಲಿ ಒಳಚರಂಡಿ ಕಾಮಗಾರಿಯ ಯೋಜನೆಯನ್ನು ಸಿದ್ದಪಡಿಸುವಂತೆ ತಿಳಿಸಿರುವೆ.

ಯೋಜನೆಯು ದೂರದೃಷ್ಟಿಯುಳ್ಳದ್ದಾಗಿರಬೇಕು. 2040 ಕ್ಕೆ ಶಿಡ್ಲಘಟ್ಟದಲ್ಲಿ ಎಷ್ಟು ಜನಸಂಖ್ಯೆ, ಮನೆಗಳ ಸಂಖ್ಯೆ ಇರುವುದೆಂದು ಅಂದಾಜಿಸಿ ಯೋಜನೆ ಸಿದ್ಧಪಡಿಸಬೇಕು. ಈಗ ಸಧ್ಯಕ್ಕಿರುವ ಒಳಚರಂಡಿಯಲ್ಲಿ ಅಲ್ಲಲ್ಲಿ ನೀರು ನಿಲ್ಲುವುದು, ರಸ್ತೆಗಳ ಮೇಲೆ ಹರಿಯುವ ಸಮಸ್ಯೆಗಳಿವೆ. ತಾಂತ್ರಿಕತೆಯನ್ನು ಬಳಸಿಕೊಂಡು ಈಗಿನ ಅಪಸವ್ಯಗಳನ್ನು ನಿವಾರಿಸಬೇಕು ಎಂದು ಹೇಳಿದ್ದೇನೆ ಎಂದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಇಇ ಆಶಾ, ಜಿಲ್ಲಾ ನಗರಾಭಿವೃದ್ಧಿ ಕೋಶ ಕಾರ್ಯಪಾಲಕ ಎಂಜಿನಿಯರ್ ಮಾಧವಿ, ಪೌರಾಯುಕ್ತ ಮಂಜುನಾಥ್, ನಗರಸಭೆ ಸದಸ್ಯರು ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version