Home News ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ

ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ

0
Sidlaghatta Valmiki Jayanti Preparation Meeting

ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಇಓ ಬಿ.ಕೆ.ಚಂದ್ರಕಾಂತ್ ಮಾತನಾಡಿದರು.

ಕೋವಿಡ್ 19 ರ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಿಂದ ವಿವಿಧ ಮಹಾಪುರುಷರ ಜಯಂತಿಗಳನ್ನು ಸರಳವಾಗಿ ಆಚರಿಸುತ್ತಿದ್ದು, ತಾಲ್ಲೂಕು ಆಡಳಿತ ಹಾಗೂ ವಾಲ್ಮೀಕಿ ಸಮುದಾಯದ ಸಹಯೋಗದಲ್ಲಿ ಅಕ್ಟೋಬರ್ 20 ರಂದು ವಾಲ್ಮೀಕಿ ಜಯಂತಿಯನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕೆ ಸ್ಥಳೀಯ ಸಮುದಾಯದ ಮುಖಂಡರು ಮತ್ತು ಅಧಿಕಾರ ವರ್ಗದ ಸಹಕಾರ ಅತ್ಯಗತ್ಯ ಎಂದು ಅವರು ಹೇಳಿದರು.

 ಶಿರಸ್ತೇದಾರ್ ಕೆ.ಎನ್.ಮಂಜುನಾಥ್ ಮಾತನಾಡಿ, ಸರ್ಕಾರಿ ಕಚೇರಿ ಹಾಗೂ ಶಾಲೆಗಳಲ್ಲಿ ವಾಲ್ಮೀಕಿ ಜಯಂತಿಯ ಅಂಗವಾಗಿ ದೀಪಾಲಂಕರ ಮಾಡಿ, ವಾಲ್ಮೀಕಿ ಬಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ತಾಲ್ಲೂಕು ಆಡಳಿತದ ವತಿಯಿಂದ ನಗರದ ಮಯೂರ ವೃತ್ತದಲ್ಲಿರುವ ಮಹರ್ಷಿ ವಾಲ್ಮೀಕಿ ದೇವಾಲಯದ ಬಳಿ ಪೂಜೆ ಸಲ್ಲಿಸುವ ವೇಳೆಗೆ ಎಲ್ಲರೂ ಹಾಜರಾಗುವಂತೆ ಸೂಚಿಸಿದರು.

 ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಸಮುದಾಯದ ಹಿರಿಯ ಮುಖಂಡ ಬಂಕ್ ಮುನಿಯಪ್ಪ ಮಾತನಾಡಿ, ವಾಲ್ಮೀಕಿಯವರ ಆದರ್ಶಗಳು, ಅವರ ದೂರದೃಷ್ಠಿ ಎಲ್ಲಾ ವಿಚಾರಗಳನ್ನು ಸಮಾಜಕ್ಕೆ ತಿಳಿಸಬೇಕಾಗಿದೆ. ಆದ್ದರಿಂದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಆಚರಣೆಯಲ್ಲಿ ಸಮಾಜದ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು ಎಂದರು.

 ಅಕ್ಟೋಬರ್ 20 ರ ಬುಧವಾರ ಬೆಳಿಗ್ಗೆ 8 ಗಂಟೆಗೆ ತಾಲ್ಲೂಕಿನ ತಲಕಾಯಲಬೆಟ್ಟದಲ್ಲಿರುವ ವಾಲ್ಮೀಕಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ನಂತರ ನಗರದ ಮಯೂರ ವೃತ್ತದಲ್ಲಿರುವ ವಾಲ್ಮೀಕಿ ದೇವಾಲಯzಲ್ಲಿ ಪೂಜೆ ಸಲ್ಲಿಸಿ ವಾಲ್ಮೀಕಿ ಭವನದಲ್ಲಿ ಕೋವಿಡ್ 19 ರ ಸರ್ಕಾರದ ಮಾರ್ಗಸೂಚಿಯನ್ವಯ ಕಾರ್ಯಕ್ರಮ ನಡೆಸಲಾಗುವುದು ಎಂದರು.

 ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ಸಮುದಾಯದ 10 ವಿದ್ಯಾರ್ಥಿಗಳು ಹಾಗೂ ಸಮುದಾಯದ ಹಿರಿಯ ಮುಖಂಡರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡಲು ಸೂಚಿಸಿದರು.

 ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಸಮುದಾಯದ ಹಿರಿಯ ಮುಖಂಡ ಎನ್.ಮುನಿಯಪ್ಪ, ಸಮುದಾಯದ ಮುಖಂಡರಾದ ದ್ಯಾವಪ್ಪ, ಮುಗಿಲಡಿಪಿನಂಜಪ್ಪ, ರಾಜೇಂದ್ರ, ನಟರಾಜ್, ಕೆ.ಬಿ.ಮಂಜುನಾಥ್, ಶ್ರೀನಾಥ್, ಮುತ್ತೂರು ವೆಂಕಟೇಶ್, ಗಿರೀಶ್ ನಾಯಕ್ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version