Sidlaghatta : ವಿಶ್ವಕರ್ಮ ಸಮಾಜವು ಭವ್ಯ ಪರಂಪರೆಯುಳ್ಳ ಸಮಾಜ. ವಾಸ್ತು ಶಿಲ್ಪವನ್ನು ಬಲ್ಲವರು. ಮನೆ, ದೇವಾಲಗಳ ನಿರ್ಮಾಣದಲ್ಲಿ ವಿಶ್ವಕರ್ಮ ಸಮಾಜದ ಕೈಚಳಕವಿದೆ. ಪ್ರತಿಯೊಂದು ಕಲೆಯಲ್ಲೂ ವಿಶ್ವಕರ್ಮ ಸಮಾಜದ ಅವಿಸ್ಮರಣೀಯ ಕೊಡುಗೆಯಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ವಿಶ್ವಕರ್ಮ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದರು.
ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಿ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತಯಾರಿ ಮಾಡಿಕೊಳ್ಳಲು ಅನುವು ಮಾಡಿಕೊಡಿ. ವಿದ್ಯೆಯೇ ಆಸ್ತಿ ಎಂದು ಹೇಳಿದರು.
SSLC ಮತ್ತು PUC ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿರುವ ಸಮುದಾಯದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಅಮರನಾರಾಯಣಚಾರಿ, ಕಾಳಿಕಾಂಭ ಕಮಟೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷ ಮುನಿರತ್ನಾಚಾರಿ, ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಜನಾರ್ಧನ ಮೂರ್ತಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ಬಂಕ್ ಮುನಿಯಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ರಾಮಚಂದ್ರ, ನಗರಸಭೆ ಪೌರಾಯುಕ್ತ ಮಂಜುನಾಥ್, ಪಿ.ಎಸ್.ಐ ವೇಣುಗೋಪಾಲ್, ಕಾರ್ಯದರ್ಶಿ ಶ್ರೀನಾಥ್ ನಿರ್ದೇಶಕರುಗಳಾದ ಸುಂದರ ಚಾರಿ, ಮಂಜುನಾಥ್, ಜಗದೀಶ್, ಮೋಹನ್, ರಾಘವೇಂದ್ರ, ಮಂಜುಳಾ ಜಗದೀಶ್, ಛಾಯಾ ರಮೇಶ್, ಜಗದೀಶ್ ಬಾಬು, ತಾಲ್ಲೂಕಿನ ವಿಶ್ವಕರ್ಮ ಸಮಾಜದ ಕುಲಬಾಂಧವರು ಹಾಜರಿದ್ದರು.