ಶಿಡ್ಲಘಟ್ಟದ ತಹಶೀಲ್ದಾರ್ ಅವರ ಕಚೇರಿಯಲ್ಲಿ ಜುಲೈ 19 ಮತ್ತು 22 ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಿದ್ಧತೆಗಳ ಕುರಿತಾದ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆಯಲ್ಲಿ ತಹಶೀಲ್ದಾರ್ ರಾಜೀವ್ ಅವರು ಮಾತನಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಿದ್ಧತೆಗಳು ಸಮರ್ಪಕವಾಗಿ ನಡೆಸಬೇಕು. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಪರೀಕ್ಷೆಗೆ ಮುಂಚೆ ಮತ್ತು ಪರೀಕ್ಷೆಯ ನಂತರ ಕೊಠಡಿಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಬೇಕು. ನಗರಸಭೆ ಮತ್ತು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಪರೀಕ್ಷೆಗಾಗಿ ಕೈಗೊಂಡಿರುವ ಪೂರ್ವಸಿದ್ಧತೆಗಳ ಬಗ್ಗೆ ಪ್ರಭಾರಿ ಬಿಇಒ ಆಂಜನೇಯ ಅವರು ಸಭೆಗೆ ಮಾಹಿತಿ ನೀಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಾಲ್ಲೂಕು ನೋಡಲ್ ಅಧಿಕಾರಿ, ಬಿಇಒ ಕಚೇರಿಯ ಇಸಿಒ ಭಾಸ್ಕರ ಗೌಡ ಅವರು ಪರೀಕ್ಷಾ ಕೇಂದ್ರಗಳು ಮತ್ತು ವಿದ್ಯಾರ್ಥಿಗಳ ಸಂಖ್ಯೆ ಮುಂತಾದ ಮಾಹಿತಿಯನ್ನು ಸಭೆಯಲ್ಲಿ ವಿವರಿಸಿದರು.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಪ್ರತಿ ಕೇಂದ್ರದಲ್ಲಿ ಇಬ್ಬರು ಆಶಾ ಕಾರ್ಯಕರ್ತೆಯರು ಮತ್ತು ಒಬ್ಬರು ಏ.ಎನ್.ಎಂ ಗಳನ್ನು ನಿಯೋಜಿಸಿರುವುದಾಗಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ ಸಭೆಗೆ ಮಾಹಿತಿ ನೀಡಿದರು. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಶಿಸ್ತು ಮತ್ತು ಸಾಮಾಜಿಕ ಅಂತರವನ್ನು ನಿರ್ವಹಿಸಲು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ತಲಾ ಇಬ್ಬರು ಸ್ವಯಂ ಸ್ವಯಂಸೇವಕರನ್ನು ನಿಯೋಜಿಸಿರುವುದಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಸಿ.ಬಿ ಪ್ರಕಾಶ್ ರವರು ಹೇಳಿದರು.
ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚಂದ್ರಪ್ಪ ಮಾತನಾಡಿ, ಪರೀಕ್ಷಾ ಕೇಂದ್ರಗಳಿರುವ ಆಯಾ ಪಂಚಾಯಿತಿ ಪಿಡಿಒಗಳ ನೇತೃತ್ವದಲ್ಲಿ ಸ್ವಚ್ಚತೆ ಮತ್ತು ಸ್ಯಾನಿಟೇಷನ್ ಮಾಡಿಸುವುದಾಗಿ ಹೇಳಿದರು. ಪರೀಕ್ಷೆ ಬೇಕಾಗಿರುವ ಅಗತ್ಯ ಸಿಬ್ಬಂದಿ ಮತ್ತು ಎಸ್ಕಾರ್ಟ್ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯಿಂದ ಸರ್ಕಾರದ ನಿರ್ದೇಶನದಂತೆ ಒದಗಿಸಲಾಗುವುದೆಂದು ಪೋಲಿಸ್ ಇಲಾಖೆ ಅಧಿಕಾರಿಗಳು ನುಡಿದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi