Sidlaghatta : ಶಿಡ್ಲಘಟ್ಟ ನಗರದ ಹೊರವಲಯದ ಬಿಜಿಎಸ್ ಪಬ್ಲಿಕ್ ಶಾಲೆ (BGS Public School) 100% ಫಲಿತಾಂಶ ದಾಖಲಿಸಿದ್ದು, ಶಾಲೆಯ ವಿದ್ಯಾರ್ಥಿನಿ ಜಿ.ಹರ್ಷಿತಾ SSLC ಪರೀಕ್ಷೆಯಲ್ಲಿ ಶೇ 100ರಷ್ಟು ಅಂಕಗಳನ್ನು ಪಡೆದು ತಾಲ್ಲೂಕಿಗೆ ಮೊದಲಿಗಳಾಗಿದ್ದಾಳೆ. ಈ ಶಾಲೆಯ ಒಟ್ಟು 31 ವಿದ್ಯಾರ್ಥಿಗಳು ಶೇ 95ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.
Sidlaghatta ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯು (Dolphin School) SSLC ಪರೀಕ್ಷೆಯಲ್ಲಿ 100% ಫಲಿತಾಂಶವನ್ನು ದಾಖಲಿಸಿದೆ. ಈ ಶಾಲೆಯ ಒಟ್ಟು 10 ವಿದ್ಯಾರ್ಥಿಗಳು ಶೇ 95ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.
Sidlaghatta ನಗರದ ವಾಸವಿ ವಿದ್ಯಾಸಂಸ್ಥೆಯು (Vasavi School) SSLC ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶವನ್ನು ದಾಖಲಿಸಿದೆ. ಈ ಶಾಲೆಯ ಒಟ್ಟು 4 ವಿದ್ಯಾರ್ಥಿಗಳು ಶೇ 98 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.