ಮಕ್ಕಳು ಆರೋಗ್ಯವಂತರಾಗಬೇಕು. ಮೊಬೈಲ್ ದಾಸರಾಗದೇ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿರಬೇಕು ಎಂಬ ಉದ್ದೇಶದಿಂದ ಕರಾಟೆ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದೆವು. ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು ಎಂದು ಕರಾಟೆ ಶಿಕ್ಷಕ ಅರುಣ್ ಕುಮಾರ್ ತಿಳಿಸಿದರು.
ಶಿಡ್ಲಘಟ್ಟ ನಗರದ ಅರಳೇಪೇಟೆಯ ಬಸವೇಶ್ವರ ದೇವಾಲಯದ ಆವರಣದಲ್ಲಿ ಜೈ ಭಾರತ್ ಕರಾಟೆ ಮತ್ತು ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ 18 ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರಮಾಣ ಪತ್ರವನ್ನು ವಿತರಿಸಿ ಅವರು ಮಾತನಾಡಿದರು.
ಈ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಕರಾಟೆ, ಸ್ಕೇಟಿಂಗ್, ಡ್ಯಾನ್ಸ್, ಜಿಮ್ನಾಸ್ಟಿಕ್, ಈಜು ತರಬೇತಿಯನ್ನು ನೀಡಲಾಯಿತು. ಶಿಬಿರದಲ್ಲಿ 25ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಬೆಳೆಯುವ ಮಕ್ಕಳಿಗೆ ಈ ರೀತಿಯ ದೈಹಿಕ ಮತ್ತು ಮಾನಸಿಕ ತರಬೇತಿ ಅತ್ಯಗತ್ಯ ಎಂದು ಹೇಳಿದರು.