Taduru, sidlaghatta : ಶಿಡ್ಲಘಟ್ಟ ತಾಲ್ಲೂಕಿನ ತಾದೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ JDS ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಒಟ್ಟು 13 ಸಂಖ್ಯಾ ಬಲದ ಡೇರಿಯಲ್ಲಿ ಇಬ್ಬರು ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು ಉಳಿದ 11 ಮಂದಿ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ.
ಸಾಮಾನ್ಯ ಸ್ಥಾನದಿಂದ ಮುರಳಿ, ಮುನಿಕೃಷ್ಣ, ನರಸಿಂಹಪ್ಪ.ಎನ್, ಮುನಿಕೃಷ್ಣ.ಟಿ.ಬಿ, ಗಂಗರೆಡ್ಡಿ, ಮುನೇಗೌಡ.ಟಿ.ಎನ್, ಮಂಜುನಾಥ, ಪ.ಜಾತಿ ಮೀಸಲು ಕ್ಷೇತ್ರದಿಂದ ರಾಮಾಂಜಿ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಮುನೇಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ರತ್ನಮ್ಮ, ಬೇಬಿ, ಚುನಾಯಿತರಾಗಿದ್ದು ಪ.ಪಂಗಡ ಮೀಸಲು ಕ್ಷೇತ್ರದಿಂದ ನರಸಿಂಹಮೂರ್ತಿ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಇಂದ್ರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಜುನಾಥರೆಡ್ಡಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.