Sidlaghatta : ಶಿಡ್ಲಘಟ್ಟ ತಾಲ್ಲೂಕಿನ ತಲಕಾಲಬೆಟ್ಟದ ಐತಿಹಾಸಿಕ ಪುರಾಣ ಪ್ರಸಿದ್ಧ ಶ್ರೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ (Talakayalabetta Sri Venkataramanaswamy Temple) ಇಂದು ಶ್ರಾವಣ ಮಾಸದ ನಾಲ್ಕನೇ ಶನಿವಾರದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆಯಿಂದಲೂ ದೇವಾಲಯಕ್ಕೆ ತಂಡೋಪ ತಂಡವಾಗಿ ಆಗಮಿಸಿದ ಭಕ್ತಾದಿಗಳು, ದೇವರ ದರ್ಶನ ಪಡೆದರು.
ತಾಲ್ಲೂಕಿನ ತಲಕಾಯಲ ಬೆಟ್ಟ ಐತಿಹಾಸಿಕ ಮತ್ತು ಪುರಾಣ ಪ್ರಸಿದ್ಧ ಕ್ಷೇತ್ರವಾಗಿದ್ದು, ಇಲ್ಲಿನ ಶ್ರೀವೆಂಕಟರಮಣಸ್ವಾಮಿಗೆ ಶ್ರಾವಣ ಮಾಸದ ಪ್ರತಿ ಶನಿವಾರವು ವಿಶೇಷ ಪೂಜೆ ಹಮ್ಮಿಕೊಳ್ಳಲಾಗುತ್ತದೆ, ಅದರಲ್ಲೂ ಶ್ರಾವಣ ಮಾಸದ ನಾಲ್ಕನೇ ಶನಿವಾರ ಭಕ್ತಾದಿಗಳ ದಂಡು ಹೆಚ್ಚಿನ ಸಂಖ್ಯೆಯಲ್ಲಿ ಹರಿದು ಬರುತ್ತದೆ.
ಇಂದು ಶ್ರಾವಣ ಮಾಸದ ನಾಲ್ಕನೇ ಶನಿವಾರವಾಗಿದ್ದರಿಂದ ತಾಲೂಕಿನ ಮೂಲೆ ಮೂಲೆಗಳಿಂದಲೂ ಭಕ್ತಾದಿಗಳು ದೂರದ ಊರುಗಳಿಂದ ತಂಡೋಪತಂಡವಾಗಿ ಆಗಮಿಸಿ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.
ಶ್ರೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ದೇವರಿಗೆ ಬೆಳ್ಳಗೆ ಇಂದಲು ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಇನ್ನೂ ಬೆಳಗಿನಿಂದಲೇ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ತಮ್ಮ ಹರಕೆ ಸಲ್ಲಿಸಿದರು.
ದೇವಾಲಯಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.