ಶಿಡ್ಲಘಟ್ಟ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಬ್ದುಲ್ ಸಾಬ್ ರಾಜ್ಯ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಸಂಸ್ಥೆ ವತಿಯಿಂದ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರದಲ್ಲಿ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಮಾತನಾಡಿದರು.
ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಗ್ರಾಮಗಳಲ್ಲಿ ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಗಳು ಒದಗಿಸಿದಾಗ ನಿಮ್ಮನ್ನು ಆಯ್ಕೆ ಮಾಡಿದ ಜನತೆಗೆ ನ್ಯಾಯ ಒದಗಿಸಿದಂತಾಗುತ್ತದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ತಮ್ಮ 5 ವರ್ಷದ ಗ್ರಾಮ ಪಂಚಾಯಿತಿ ನಿರ್ವಹಣೆಗೆ ಅತ್ಯಗತ್ಯವಾದ ತರಬೇತಿಯನ್ನು ಪಡೆದುಕೊಂಡು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದರು.
ಗ್ರಾಮ ಪಂಚಾಯಿತಿ ಸದಸ್ಯರು ಒಳ್ಳೆ ಸೇವಾ ಮನೋಭಾವ ಇಟ್ಟುಕೊಂಡು ಕೆಲಸ ಮಾಡಲಿಕ್ಕೆ ಇದು ಒಳ್ಳೆಯ ಕ್ಷೇತ್ರವಾಗಿದೆ. ಮಹಿಳೆಯರು ಹೆಚ್ಚಾಗಿ ಇಂತಹ ತರಬೇತಿಗಳಲ್ಲಿ ಭಾಗವಹಿಸಬೇಕು. ಶೇ 50ರಷ್ಟು ಮಹಿಳೆಯರನ್ನು ಪಂಚಾಯತ್ ರಾಜ್ ಅಧಿನಿಯಮದಡಿ ಸದಸ್ಯರನ್ನಾಗಿ ಆಯ್ಕೆ ಮಾಡಿದ್ದೇವೆ. ಇತ್ತೀಚೆಗೆ ಮಹಿಳೆಯರ ಸಮಸ್ಯೆಗಳು ಹೆಚ್ಚಾಗಿರುವುದರಿಂದ ಲಾಕ್ ಡೌನ್ ಸಂದರ್ಭದಲ್ಲಿ ಬಾಲ್ಯ ವಿವಾಹ, ಶಿಶು ತಾಯಿ ಮರಣ ಪ್ರಮಾಣ ಹಾಗೂ ಮಹಿಳೆಯ ಇತರೆ ಸಮಸ್ಯೆಗಳು ಹೆಚ್ಚಾಗಿರುವುದರಿಂದ ಮಹಿಳಾ ಸದಸ್ಯರು ಹೋರಾಟ ಮಾಡಿ ಮಹಿಳೆಯರಿಗೆ ನ್ಯಾಯ ದೊರಕಿಸಿ ಕೊಟ್ಟಾಗ ನಿಮ್ಮನ್ನು ಆಯ್ಕೆ ಮಾಡಿದ ಜನತೆಗೆ ಸದಸ್ಯರಿಗೆ ನ್ಯಾಯ ದೊರಕಿಸಿದಂತಾಗುತ್ತದೆ ಎಂದು ಹೇಳಿದರು .
ತರಬೇತಿ ಕಾರ್ಯಾಗಾರದಲ್ಲಿ ತರಬೇತಿ ಸಂಪನ್ಮೂಲ ವ್ಯಕ್ತಿ ರಾಮಕೃಷ್ಣಪ್ಪ, ಅಬ್ಲೂಡು ಭಾರತಮ್ಮ, ಚೀಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಪ್ಪ, ಈ ತಿಮ್ಮಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ, ಸಹಾಯಕ ಲೆಕ್ಕಾಧಿಕಾರಿ ಸದಾಶಿವ ಕುಮಾರ್, ಈ ತಿಮ್ಮಸಂದ್ರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತನ್ವೀರ್ ಭಾಗವಹಿಸಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi