Sidlaghatta : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೌಕರರ ರಾಜ್ಯ ಮಟ್ಟದ ಕ್ರೀಡಾ ಕೂಟದ ಕೇರಂ ಸಿಂಗಲ್ಸ್‌ನಲ್ಲಿ ಶಿಕ್ಷಕ ಆರ್.ಸುಂದರಾಚಾರಿ ವಿಜೇತರಾಗಿ ರಾಷ್ಟ್ರ ಮಟ್ಟದ ಕೇರಂ ಸಿಂಗಲ್ಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಅ.27ರಿಂದ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕೇರಂ ಸಿಂಗಲ್ಸ್‌ನಲ್ಲಿ 2ನೇ ಸ್ಥಾನದೊಂದಿಗೆ ಗೆದ್ದಿರುವ ಶಿಡ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ಆರ್.ಸುಂದರಾಚಾರಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸತತವಾಗಿ 13 ವರ್ಷಗಳಿಂದಲೂ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕೇರಂ ಸಿಂಗಲ್ಸ್‌ನಲ್ಲಿ ಭಾಗವಹಿಸುತ್ತಿರುವ ಆರ್.ಸುಂದರಾಚಾರಿ ಅವರು 3 ಸಲ ರಾಷ್ಟ್ರೀಯ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದು ಇದೀಗ ಮತ್ತೊಮ್ಮೆ ಆಯ್ಕೆ ಆಗಿದ್ದಾರೆ.
ಗುಜರಾತ್‌ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕೇರಂ ಸಿಂಗಲ್ಸ್‌ಗೆ ಆಯ್ಕೆಯಾಗುವ ಮೂಲಕ ರಾಜ್ಯ, ಜಿಲ್ಲೆ, ತಾಲ್ಲೂಕಿಗೆ ಕೀರ್ತಿ ತಂದಿರುವ ಸುಂದರಾಚಾರಿ ಅವರಿಗೆ ನಾನಾ ಸಂಘ ಸಂಸ್ಥೆಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.
ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ , ಶಿಡ್ಲಘಟ್ಟ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶ್ರೀಕಾಂತ್, ಕ್ರೀಡಾಂಗಣ ಅಭಿವೃದ್ದಿ ಸಮಿತಿಯ ನಿರಂಜನ್, ಟಿ.ಟಿ.ನರಸಿಂಹಪ್ಪ, ರಾಷ್ಟ್ರೀಯ ಅಥ್ಲೆಟಿಕ್ ಜಯಂತಿಗ್ರಾಮ ನಾರಾಯಣಸ್ವಾಮಿ ಅಭಿನಂದಿಸಿದ್ದಾರೆ.