ಹಿರಿಯ ಬಿಜೆಪಿ ಪಕ್ಷದ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರಿಗೆ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಸರ್ಕಾರದ ಸಚಿವಸಂಪುಟದಲ್ಲಿ ಸೂಕ್ತಸ್ಥಾನಮಾನ ನೀಡಬೇಕು. ಸಚಿವಸ್ಥಾನ ನೀಡಿ ಅವರ ಸೇವೆಗೆ ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪದಾಧಿಕಾರಿಗಳು, ಶಿಕ್ಷಣ, ಶಿಕ್ಷಕ ಕ್ಷೇತ್ರಕ್ಕೆ ವೈಎಎನ್ ಅವರ ಕೊಡುಗೆ ಅಪಾರವಾದುದು. ಮೂರು ಬಾರಿ ವಿಧಾನಪರಿಷತ್ ಸದಸ್ಯರಾಗಿ, ಒಮ್ಮೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ಜನಮನದಲ್ಲಿ ಸ್ಥಾನಪಡೆದಿದ್ದಾರೆ. ಅವರ ಸೇವೆಯು ರಾಜ್ಯಕ್ಕೆ ಅಗತ್ಯವಾಗಿದ್ದು ಸೂಕ್ತ ಸಚಿವಸ್ಥಾನ ನೀಡುವಲ್ಲಿ ಪ್ರಥಮ ಆದ್ಯತೆಯಲ್ಲಿ ಅವರ ಹೆಸರನ್ನು ಪರಿಗಣಿಸಬೇಕಿದೆ ಎಂದಿದ್ದಾರೆ.
ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಂ.ಕೆಂಪಣ್ಣ ಮಾತನಾಡಿ, ವೈಎಎನ್ ಅವರು ಆಗ್ನೇಯ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿ ನಿರಂತರವಾಗಿ ಚುನಾಯಿತರಾಗುತ್ತಿದ್ದಾರೆ. ಶಿಕ್ಷಕರ, ಶಿಕ್ಷಣಸಂಸ್ಥೆಗಳ, ಸರ್ಕಾರಿ ಶಾಲೆಗಳಲ್ಲಿ ಕಷ್ಟ, ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ಐದಾರು ಜಿಲ್ಲೆಗಳು ಬರಲಿದ್ದು ಅಷ್ಟೂ ವ್ಯಾಪ್ತಿಯಲ್ಲಿ ಪಕ್ಷಸಂಘಟನೆಗೂ ಸಹಾಯಕವಾಗಲಿದ್ದು ಅವರಿಗೆ ಈ ಅವಧಿಯಲ್ಲಿ ಸೂಕ್ತ ಸಚಿವಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದ್ದಾರೆ.
ತಾಲ್ಲೂಕು ಪ್ರಬಾರಿ ಕ್ಷೇತ್ರಶಿಕ್ಷಣಾಧಿಕಾರಿ ಆಂಜನೇಯ, ಶಿಕ್ಷಣಸಂಯೋಜಕ ಭಾಸ್ಕರಗೌಡ, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ, ಕಾರ್ಯದರ್ಶಿ ಎಲ್.ವೆಂಕಟರೆಡ್ಡಿ, ಉಪಾಧ್ಯಕ್ಷ ಎಂ.ಕೆ.ಸಿದ್ಧರಾಜು, ಸಂಘಟನಾಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ, ತಾಲ್ಲೂಕು ಪ್ರಾಥಮಿಕಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ಪದಾಧಿಕಾರಿಗಳು ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi