ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಮುಜರಾಯಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಅರ್ಚಕರಿಗೆ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಸಂಕಷ್ಟದ ಸಮಯದಲ್ಲಿ ಜನರು ಭಯಬೀಳುವ ಬದಲಿಗೆ ಸರ್ಕಾರ ಸೂಚಿಸಿರುವ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಎಚ್ಚರಿಕೆ ವಹಿಸಬೇಕು. ಕೊರೊನಾ ಹಿನ್ನಲೆಯಲ್ಲಿ ದೇವಾಲಯಗಳಲ್ಲಿ ಪ್ರತಿನಿತ್ಯ ಪೂಜೆ ಸಲ್ಲಿಸುವ ಅರ್ಚಕರು ಸಹ ಸಂಕಷ್ಟಕ್ಕೆ ಸಿಲುಕಿದ್ದು ಸರ್ಕಾರ ಅರ್ಚಕರ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಕೊರೊನಾ ಸಂಕಷ್ಟದ ನಡುವೆ ದೇವಾಲಯದ ಆದಾಯವನ್ನೆ ನಂಬಿ ಜೀವನ ನಡೆಸುತ್ತಿರುವ ಮುಜರಾಯಿ ದೇವಾಲಯಗಳ ಅರ್ಚಕರು ಹಾಗೂ ಸಿಬ್ಬಂದಿಗೆ ಸರ್ಕಾರದಿಂದ ದಿನಸಿ ಕಿಟ್ ವಿತರಿಸುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ನಗರಸಭೆ ಸದಸ್ಯರಾದ ಎಂ.ಮುನಿರಾಜು, ಕೃಷ್ಣಮೂರ್ತಿ, ದೇವಾಲಯ ಟ್ರಸ್ಟ್ ಅಧ್ಯಕ್ಷ ಬಿ.ಪಿ.ರಾಘವೇಂದ್ರ, ಕಾರ್ಯದರ್ಶಿ ಎಲ್.ಮಧುಸೂದನ್, ಮನೋಹರ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi