Sidlaghatta : ಶಿಡ್ಲಘಟ್ಟ ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ (Vasavi Kalyana Mantapa) ಸೋಮವಾರ ಶಿಡ್ಲಘಟ್ಟ ತಾಲ್ಲೂಕು ಮರಗೆಲಸ ಕಾರ್ಮಿಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಮಿಕರ ದಿನಾಚರಣೆ (Labour Day)ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ವಿ.ಮುನಿಯಪ್ಪ (V Muniyappa) ಮಾತನಾಡಿದರು.
ಕಾರ್ಮಿಕ ಇಲಾಖೆಯಿಂದ ಮರಗೆಲಸಗಾರರಿಗೆ ಸಿಗುವ ಸವಲತ್ತುಗಳನ್ನು ಸದ್ಭಳಕೆ ಮಾಡಿಕೊಳ್ಳುವ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕೆಲಸ ಆಗಬೇಕು. ಮರಗೆಲಸಗಾರರ ಸಂಘದ ವತಿಯಿಂದ ಅರ್ಹ ದಾಖಲೆಗಳನ್ನು ಒದಗಿಸಿದಲ್ಲಿ ಮುಂದಿನ ದಿನಗಳಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಸಾಲ ಕೊಡಿಸುವ ಭರವಸೆ ಅವರು ನೀಡಿದರು.
ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ವರಲಕ್ಷ್ಮಿ ಮಾತನಾಡಿ, ಮರಗೆಲಸಗಾರರಿಗೆ ಇಲಾಖೆಯಿಂದ ಉತ್ತಮ ಸವಲತ್ತುಗಳು ಸಿಗುತ್ತಿದ್ದು ಇದರ ಸದ್ಭಳಕೆ ಮಾಡಿಕೊಳ್ಳಬೇಕು. ಮಕ್ಕಳ ವಿದ್ಯಾಭ್ಯಾಸ, ವಿವಾಹ, ಆರೋಗ್ಯ ಚಿಕಿತ್ಸೆಗಾಗಿ ಸಹಾಯಧನ ಸಿಗಲಿದ್ದು ಮರಗೆಲಸಗಾರರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು. ಕಟ್ಟಡ ಕಾರ್ಮಿಕರು ಹೆಚ್ಚಿರುವ ಪ್ರದೇಶಗಳಲ್ಲಿ ಶಿಶುಪಾಲನಾ ಕೇಂದ್ರಗಳ ಸ್ಥಾಪನೆ ಸೇರಿದಂತೆ ಆರೋಗ್ಯ ತಪಾಸಣೆಗಾಗಿ ಮೊಬೈಲ್ ವ್ಯಾನ್ ವ್ಯವಸ್ಥೆ ಸಹ ಕಲ್ಪಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಹಿರಿಯ ಮರಗೆಲಸ ಕಾರ್ಮಿಕರು ಹಾಗು ಪ್ರತಿಭಾವಂತ ಕಾರ್ಮಿಕರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಾಜಿ ಶಾಸಕ ಎಂ.ರಾಜಣ್ಣ, ನಗರಸಭೆ ಅಧ್ಯಕ್ಷೆ ಸುಮಿತ್ರರಮೇಶ್, ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ತಾಲ್ಲೂಕು ಆರೋಗ್ಯಧಿಕಾರಿ ಡಾ.ವೆಂಕಟೇಶ್‌ಮೂರ್ತಿ, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ವರಲಕ್ಷ್ಮಿ, ಮರಗೆಲಸ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ವೆಂಕಟೇಶ್, ತಾಲ್ಲೂಕು ಮರಗೆಲಸ ಕಾರ್ಮಿಕರ ಸಂಘದ ಅಧ್ಯಕ್ಷ ಪ್ರದೀಪ್(ದೀಪು), ಪ್ರಧಾನ ಕಾರ್ಯದರ್ಶಿ ಬಾಬು, ಮಾಜಿ ಅಧ್ಯಕ್ಷ ಕೆ.ಮಂಜುನಾಥ್, ಜಂಟಿ ಕಾರ್ಯದರ್ಶಿಗಳಾದ ರಾಮಾಂಜನೇಯ, ಹರೀಶ್, ಸಂಘಟನಾ ಕಾರ್ಯದರ್ಶಿಗಳಾದ ಶಂಕರಪ್ಪ, ಆರ್.ಪ್ರಕಾಶ್, ಸಂಚಾಲಕರಾದ ಖಾದರ್‌ಪಾಷ, ಯಾಸೀನ್ ಪಾಷ ಹಾಜರಿದ್ದರು.