Home News ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ

ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ

0
SSLC exam highest marks felicitation vachana sahitya Sidlaghatta

ಶಿಡ್ಲಘಟ್ಟ ನಗರದ ನಗರ್ತಪೇಟೆಯ ಕಾಳಿಕಾಂಬ ಕಮಠೇಶ್ವರ ಸಮುದಾಯ ಭವನದಲ್ಲಿ ವಚನ ಸಾಹಿತ್ಯ ಪರಿಷತ್ ಹಾಗೂ ಸರಕಾರಿ ನಿವೃತ್ತ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳು ಹಾಗೂ ರಾಜ್ಯ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರನ್ನು ಸನ್ಮಾನಿಸುವ ಕಾರ‍್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಗಮನಿಸಿದರೆ ನಗರದಲ್ಲಿ ಹೆಚ್ಚಿನ ಸೌಲಭ್ಯಗಳು ಇರಲಿವೆ. ಅದೆಲ್ಲವನ್ನೂ ಮೀರಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ ನಗರದಲ್ಲಿನ ವಿದ್ಯಾರ್ಥಿಗಳನ್ನು ಮೀರಿ ಸಾಧನೆ ಮೆರೆಯುತ್ತಿರುವುದು ಸಂತಸದ ವಿಷಯ. ಪರಿಶ್ರಮ ಶ್ರದ್ದೆ ಛಲ ಗುರಿ ಮುಟ್ಟುವವರೆಗೂ ಕ್ಷಣಿಕ ಸುಖಗಳನ್ನು ತ್ಯಜಿಸುವವರಿಗೆ ಮಾತ್ರ ವಿದ್ಯೆ ಒಲಿಯುತ್ತದೆ ಎಂದು ಅವರು ತಿಳಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರ್ತಿಸಿ ಪುರಸ್ಕರಿಸುವುದರಿಂದ ಇತರೆ ವಿದ್ಯಾರ್ಥಿಗಳಿಗೆ ಅದು ಸಾಧನೆ ಮಾಡಲು ಪ್ರೇರಣೆ ಆಗಲಿದೆ, ಅವರ ಹೆತ್ತವರಿಗೆ ಆ ಕ್ಷಣ ಜೀವನದಲ್ಲಿ ಮರೆಯಲಾರದ ಕ್ಷಣವಾಗಲಿದೆ ಎಂದು ತಿಳಿಸಿದರು.

SSLC ಯಲ್ಲಿ 625 ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕಿ ಉಷಾ ಮತ್ತು ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.

ವಚನ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನಾರಾಯಣಸ್ವಾಮಿ, ಸಾಹಿತಿ ಕೋಡಿರಂಗಪ್ಪ, ಎಸ್.ಎಫ್.ಸಿ.ಎಸ್ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ನಗರಸಭೆ ಸದಸ್ಯ ಅನಿಲ್ ಕುಮಾರ್, ಕೃಷ್ಣಮೂರ್ತಿ, ನವಮೋಹನ್, ಗಾ.ನ.ಅಶ್ವತ್ಥ್, ಸುಂದರಾಚಾರಿ, ಜಗದೀಶ್, ಮುನಿರತ್ನಮಾಚಾರಿ, ವಿಜಯ್‌ಕುಮಾರ್, ಶ್ರೀನಿವಾಸ್‌ಮೂರ್ತಿ, ಶ್ರೀನಿವಾಸ್, ಜನಾರ್ಧನ್, ಮಂಚೇನಹಳ್ಳಿ ಶ್ರೀನಿವಾಸ್, ಉಷಾ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version