Varadanayakanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಮಧ್ಯಾಹ್ನದ ಉಪಹಾರ ಯೋಜನೆ (Mid Day Meal) ಹಾಗೂ ಜಿಲ್ಲಾ ಪಂಚಾಯಿತಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಮಕ್ಕಳಿಗೆ ಊಟದ ಜೊತೆ ಮೊಟ್ಟೆ/ಬಾಳೆಹಣ್ಣು/ಶೇಂಗಾಚಿಕ್ಕಿ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅಕ್ಷರದಾಸೋಹ ಸಹಾಯಕ ನಿರ್ದೇಶಕ ಆಂಜನೇಯುಲು ಅವರು ಮಾತನಾಡಿದರು.
ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಿಸಲು 1 ರಿಂದ 8ನೇ ತರಗತಿ ಮಕ್ಕಳಿಗೆ ಸರ್ಕಾರ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ಮಕ್ಕಳು ಆರೋಗ್ಯದಿಂದಿದ್ದಾಗ ಅವರ ಕಲಿಕೆ ಪ್ರಗತಿ ಕಾಣುವುದು ಎಂದು ತಿಳಿಸಿದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಬಿ.ಎಸ್.ವೆಂಕಟೇಶ್, ಸದಸ್ಯರಾದ ವಿ.ಎಸ್.ಗೋಪಾಲಕೃಷ್ಣ, ಸಿ.ಆರ್.ಪಿ.ಪ್ರೇಮಾ, ಮುಖ್ಯಶಿಕ್ಷಕ ವೆಂಕಟೇಶ್, ಎಂ.ಎ.ರಾಮಕೃಷ್ಣಪ್ಪ, ನಾಗಭೂಷಣ, ಶಿವಪ್ಪ, ಪಂಕಜಾ, ರಮಾ ಹಾಜರಿದ್ದರು.