ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗ್ರಂಧಿಗೆ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ನಗರದ ವಾಸವಿ ರಸ್ತೆಯ ವಿಜಯ್ ಪ್ರಕಾಶ್ ಎಂಬುವವರಿಗೆ ಸೇರಿದ ಶ್ರೀಲಕ್ಷ್ಮೀ ಗ್ರಂಧಿಗೆ ಅಂಗಡಿಗೆ ಭಾನುವಾರ ರಾತ್ರಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋಗಿದ್ದು ಸುಮಾರು 10 ಲಕ್ಷ್ಷಕ್ಕೂ ಹೆಚ್ಚು ನಷ್ಟವುಂಟಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಸಕಾಲದಲ್ಲಿ ಬೆಂಕಿ ನಂದಿಸಿದ್ದಾರಾದರೂ ಅಂಗಡಿಯಲ್ಲಿದ್ದ ಎಲ್ಲಾ ಸಾಮಾನುಗಳು ಸುಟ್ಟು ಹೋಗಿದೆ.