Sidlaghatta : ಪ್ರಧಾನಿ ನರೇಂದ್ರ ಮೋದಿ ಅವರು ಈ ರಾಷ್ಟ್ರಕ್ಕೆ, ರಾಷ್ಟ್ರದ ಜನತೆಗೆ ಕೊಟ್ಟಂತಹ ಭದ್ರತೆ, ಯೋಜನೆಗಳು, ಅಭಿವೃದ್ದಿ ಪರ ಕಾರ್ಯಗಳನ್ನು ಜನ ಸಾಮಾನ್ಯರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ನಾವು ಕ್ಷೇತ್ರದ ಉದ್ದಗಲಕ್ಕೂ ಮಾಡಲಿದ್ದೇವೆ ಎಂದು ಮಾಜಿ ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಮಯೂರ ವೃತ್ತದಲ್ಲಿನ ಬಿಜೆಪಿ ಸೇವಾ ಸೌಧ ಕಚೇರಿ ಆವರಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ “ವಿಕಸಿತ ಭಾರತ ಮೋದಿ ಗ್ಯಾರಂಟಿ” ಪ್ರಚಾರದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋಲಾರ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲೂ ಇಂದು ಏಕ ಕಾಲಕ್ಕೆ ಈ ಪ್ರಚಾರ ವಾಹನಕ್ಕೆ ಪ್ರಚಾರ ನೀಡಲಾಗುತ್ತಿದ್ದು ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲೂ ಈ ವಾಹನ ಸಂಚರಿಸಲಿದೆ.
ಈ ಪ್ರಚಾರದ ಡಿಜಿಟಲ್ ವಾಹನದಲ್ಲಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿಯಿದ್ದು ಪ್ರಚಾರ ಮಾಡಲಾಗುವುದು. ಜನ ಸಾಮಾನ್ಯರಿಗೆ ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು ಸೇರಿ ಅರ್ಥಮಾಡಿಸುವ ಮನವರಿಕೆ ಮಾಡಿಕೊಡುವ ಕೆಸಲ ಮಾಡಬೇಕಿದೆ ಎಂದರು.
ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಪಕ್ಷದಿಂದ ಟಿಕೇಟ್ ಯಾರಿಗೆ ನೀಡಲಿ ಅವರನ್ನು ನಾವು ಗೆಲ್ಲಿಸಿಕೊಳ್ಳುತ್ತೇವೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಈ ಹಿಂದೆ ನಾವು ವಿಕಸಿತ ಭಾರತ ಯಾತ್ರೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಅರ್ಥೈಸುವಲ್ಲಿ ಯಶಸ್ವಿಯಾಗಿದ್ದು ಇದೀಗ ವಿಕಸಿತ ಭಾರತ ಮೋದಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಚಾರ ಮಾಡಿ ಮತದಾರರ ಮನಗೆಲ್ಲುತ್ತೇವೆ ಎಂದರು.
ವಿಕಸಿತ ಭಾರತ ಮೋದಿ ಗ್ಯಾರಂಟಿ ಯಾತ್ರೆಯ ಸಂಚಾಲಕಿ ಮಮತ, ನಗರಸಭೆ ಸದಸ್ಯ ನಾರಾಯಣಸ್ವಾಮಿ, ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಶಿಡ್ಲಘಟ್ಟ ನಗರ ಘಟಕದ ಅಧ್ಯಕ್ಷ ನರೇಶ್, ಕನ್ನಪನಹಳ್ಳಿ ಲಕ್ಷ್ಮೀನಾರಾಯಣ್, ಭರತ್ ಕುಮಾರ್, ಬಳೆ ಜಗದೀಶ್, ಮುಕೇಶ್, ನಗೇಶ್, ಅಭಿ, ಮೌನೀಶ್, ಮಂಜುಳ, ತ್ರಿವೇಣಿ, ಶ್ರೀರಾಮ್, ಶಿವು, ವೆಂಕಟಸ್ವಾಮಿ ಹಾಜರಿದ್ದರು.