ಶಿಡ್ಲಘಟ್ಟ ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಕೋವಿಡ್-19ರ ಸಂಕಷ್ಟದಲ್ಲಿರುವ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕೊರೊನಾ ಎರಡನೇ ಅಲೆಯು ಸುನಾಮಿಯಂತೆ ಅಪ್ಪಳಿಸಿ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ದೈಹಿಕವಾಗಿ ಜರ್ಜರಿತರನ್ನಾಗಿಸಿದೆ. ಈ ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂದು ನೈತಿಕವಾಗಿ ಸ್ಥೈರ್ಯವನ್ನು ತುಂಬುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.
ಕೊರೋನಾ ತಡೆಗಟ್ಟಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆಯಾದರೂ ಒಂದು, ಎರಡು ಮತ್ತು ಮೂರನೆಯ ಅಲೆಯ ಮೂಲಕ ಜನರನ್ನು ಕೊರೋನಾ ಪೀಡಿಸುತ್ತಿದೆ. ಕಳೆದ ಒಂದು ವರ್ಷದಿಂದ ಕೊರೋನಾ ಹಾವಳಿಯಿಂದ ಪ್ರತಿಯೊಬ್ಬರೂ ಸಂಕಷ್ಟಕ್ಕೆ ಸಿಲುಕಿದ್ದು ಇಂತಹವರ ನೆರವಿಗೆ ದಾವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಭಾವಿಸಿ ತಾಲೂಕಿನಾಧ್ಯಂತ ಪ್ರತಿಯೊಬ್ಬರಿಗೂ ಆಹಾರ ಧಾನ್ಯ ಪೂರೈಸಲು ಕಾರ್ಯಕ್ರಮ ರೂಪಿಸಲಾಗಿದೆ.
ಕೊರೋನಾ ಸಂಕಷ್ಟದ ಸಮಯದಲ್ಲಿ ಜನತೆ ಭಯಬೀಳುವ ಬದಲಿಗೆ ಸರ್ಕಾರ ಸೂಚಿಸಿರುವ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಕೊರೋನಾ ತಡೆಗಟ್ಟಲು ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ ನಿರೀಕ್ಷಕಿ ವರಲಕ್ಷಿö್ಮ, ತಾಲೂಕು ಕಾರ್ಮಿಕ ಇಲಾಖೆ ನಿರೀಕ್ಷಕಿ ಮಂಜುಳಾ, ನಗರಸಭೆ ಸದಸ್ಯರಾದ ತನ್ವೀರ್, ಕೃಷ್ಣಮೂರ್ತಿ, ಶ್ರೀನಿವಾಸ್, ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯ ಟ್ರಸ್ಟ್ನ ಬಿ.ಪಿ.ರಾಘವೇಂದ್ರ, ಎಲ್.ಮಧುಸೂದನ್, ಮತ್ತಿತರರು ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi