ತಾಲ್ಲೂಕಿನ ಲಕ್ಕಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಕ್ಕಯ್ಯಮ್ಮ ದೇವಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ನಂದೀಶ್ ಮಾತನಾಡಿದರು.
ಪರಿಸರ ಮನುಷ್ಯನ ಅವಿಭಾಜ್ಯ ಅಂಗ. ಪರಿಸರವಿಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಶುದ್ಧ ಗಾಳಿ, ನೆರಳು ನೀಡುವ ಪರಿಸರದಲ್ಲಿ ಶ್ವಾಸಕೋಶದಂತೆ ವರ್ತಿಸುವ ವೃಕ್ಷಗಳು ನಮಗೆ ಅಗತ್ಯ. ಹೀಗಾಗಿ ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಜೀವ ಸಂಕುಲಕ್ಕೆ ಬದುಕಲು ಅತ್ಯಾವಶ್ಯಕವಾಗಿ ಬೇಕಾಗಿರುವ ಆಮ್ಲಜನಕ ಪರಿಸರದಲ್ಲಿ ವೃದ್ಧಿಯಾಗಲು ಪ್ರತಿಯೊಬ್ಬರು ಸಸಿ ನೆಟ್ಟು ನೀರೆರೆದು ಬೆಳೆಸಬೇಕು ಎಂದು ಅವರು ಹೇಳಿದರು.
ಬಿಜೆಪಿ ಜಿಲ್ಲಾ ಮಹಿಳಾ ಯುವಮೋರ್ಚಾದ ಉಪಾಧ್ಯಕ್ಷೆ ನರ್ಮದಾ ಮಾತನಾಡಿ ಗಿಡ ಮರಗಳನ್ನು ನೆಡುವುದು, ಸಾಧ್ಯವಾದರೆ ಸಸ್ಯಗಳ ಪೋಷಣೆ ಬಗ್ಗೆ ಗಮನ ಹರಿಸುವುದು ಪ್ರತಿಯೊಬ್ಬರ ಧ್ಯೇಯವಾಗಬೇಕು. ಸಸಿ ನೆಟ್ಟರೆ ಸಾಲದು. ನೆಟ್ಟಿರುವ ಸಸಿಯನ್ನು ಬೆಳೆಯುವಂತೆ ನೋಡಿಕೊಳ್ಳುವ ಮೂಲಕ ಮರವೊಂದನ್ನು ಪರಿಸರಕ್ಕೆ ಕೊಡುಗೆಯಾಗಿ ನೀಡಬೇಕು. ಮನುಷ್ಯನ ದುರಾಸೆಗೆ ಪರಿಸರ ನಾಶವಾಗಿ ಮನುಕುಲ ವಿನಾಶದ ಅಂಚಿಗೆ ಬಂದು ನಿಂತಿದೆ. ಹೀಗಾಗಿ ಬರುವ ದಿನಗಳಲ್ಲಿ ಪರಿಸರದ ರಕ್ಷಣೆಗೆ ನಾವೆಲ್ಲ ಮುಂದಾಗಬೇಕು ಎಂದರು.
ಮುಖ್ಯಶಿಕ್ಷಕ ಶಿವಕುಮಾರ್, ಅಂಗನವಾಡಿ ಕಾರ್ಯಕರ್ತೆ ಸುಕನ್ಯ, ಗ್ರಾಮದ ಮುಖಂಡರಾದ ನಾರಾಯಣಸ್ವಾಮಿ, ಚೇತನ್, ಶಿವಕುಮಾರ್ ಹಾಜರಿದ್ದರು
ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರಿಲ್ಲಿ ಆನೂರು ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾಧಿಕಾರಿಗಳು ರುದ್ರಭೂಮಿಗೆ ಮಂಜೂರು ಮಾಡಿರುವ 2 ಎಕರೆ ಭೂಮಿಯಲ್ಲಿ 100 ಗಿಡಗಳನ್ನು ನೆಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ, ಉಪಾಧ್ಯಕ್ಷ ವಿಜಯೇಂದ್ರ, ಸದಸ್ಯರಾದ ವಿಶ್ವ, ಅರುಣ ಸುರೇಶ್, ವೆಂಕಟೇಶ್, ಸಂತೋಷ್, ಪಿಡಿಒ ಕಾತ್ಯಾಯಿನಿ ಹಾಜರಿದ್ದರು.

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನಲ್ಲಿ ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಅವರು ಶನಿವಾರ ಪರಿಸರ ದಿನಾಚರಣೆಯ ಅಂಗವಾಗಿ ಗಿಡಗಳನ್ನು ನೆಟ್ಟರು. ಯುವಶಕ್ತಿ ಅಧ್ಯಕ್ಷ ವಿಜಯಭಾವರೆಡ್ಡಿ, ತಾದೂರು ರಘು ಹಾಜರಿದ್ದರು.