Y Hunasenahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವೈ.ಹುಣಿಸೇನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಸ್ಟ್ ಪಾಯಿಂಟ್ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು (Free Health Camp) ಬುಧವಾರ ಹಮ್ಮಿಕೊಳ್ಳಲಾಗಿತ್ತು.
ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ತಪಾಸಣೆ, ಶಿಶು ವೈದ್ಯಕೀಯ ತಪಾಸಣೆ, ಹೃದಯ ರೋಗ, ಕಣ್ಣು ,ಕಿವಿ, ಮೂಗು, ಗಂಟಲು ತಪಾಸಣೆ, ಸಾಮಾನ್ಯ ಶಸ್ತ್ರಚಿಕಿತ್ಸೆ, ಸ್ತ್ರೀ ರೋಗ ಮತ್ತು ಪ್ರಸೂತಿ, ಪ್ಲಾಸ್ಟಿಕ್ ಸರ್ಜರಿ ತಪಾಸಣೆ, ಕೀಲು ಮತ್ತು ಮೂಳೆ ತಪಾಸಣೆ, ನರ ರೋಗ , ಮೂತ್ರ ಕೋಶ ಹಾಗೂ ಮೂತ್ರ ಪಿಂಡ ತಪಾಸಣೆ ಸೇರಿದಂತೆ ಇತರ ಖಾಯಿಲೆಗಳಿಗೆ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಯಿತು.
ವೈ.ಹುಣಸೇನಹಳ್ಳಿ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳ ಜನರ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹಾಜರಿದ್ದು ಚಿಕಿತ್ಸೆ ಪಡೆದುಕೊಂಡರು.