Shigehalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಶೀಗೆಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಶೀಗೆಹಳ್ಳಿ ಗ್ರಾಮದ ನಿಖಿಲ್ (13) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ತನ್ನ ಸ್ನೇಹಿತರ ಜೊತೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಿಖಿಲ್ ನೀರಿನ ಒಳಗಡೆ ಹೋದವನು ಹೊರಗಡೆ ಬಾರದೆ ಇದ್ದಾಗ, ಅಗ್ನಿಶಾಮಕ ಸಿಬ್ಬಂದಿಯವರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ 3 ಗಂಟೆಗಳ ಕಾಲ ನಿರಂತರ ಕಾರ್ಯಚರಣೆ ಬಳಿಕ ಬಾಲಕನ ಶವವನ್ನು ಹೊರತೆಗೆದಿದ್ದಾರೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ