Home Obituary ಪಿಟೀಲು ವಿದ್ವಾನ್ ಹೊಸಪೇಟೆ ಎಚ್.ಬಿ.ನಾರಾಯಣಾಚಾರ್

ಪಿಟೀಲು ವಿದ್ವಾನ್ ಹೊಸಪೇಟೆ ಎಚ್.ಬಿ.ನಾರಾಯಣಾಚಾರ್

0

 ಪಿಟೀಲು ವಿದ್ವಾನ್ ಹೊಸಪೇಟೆ ಎಚ್.ಬಿ.ನಾರಾಯಣಾಚಾರ್(98) ಬುಧವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರು ಎಂಟು ಮಂದಿ ಹೆಣ್ಣುಮಕ್ಕಳು ಒಬ್ಬ ಮಗ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

 ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಹೊಸಪೇಟೆಯ ವಿದ್ವಾನ್ ಎಚ್.ಬಿ.ನಾರಾಯಣಾಚಾರ್ ತಮ್ಮ ಜೀವನವನ್ನೆಲ್ಲಾ ಕಲಾ ಸೇವೆ ಮತ್ತು ಪಿಟೀಲು ನುಡಿಸುವುದರಲ್ಲಿಯೇ ಕಳೆದವರು. ಕರ್ನಾಟಕ ಮಾತ್ರವಲ್ಲದೆ, ನೆರೆಯ ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ನಿರಂತರವಾಗಿ ಪಿಟೀಲು ಸೋಲೋ ಕಾರ್ಯಕ್ರಮವನ್ನು ನೀಡಿದ್ದಾರೆ.

  ಇವರ ಸಂಗೀತ ಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಗೌರವ ಪುರಸ್ಕಾರಗಳೊಂದಿಗೆ ಸತ್ಕರಿಸಿವೆ. ‘ನಾದ ಚಿಂತಾಮಣಿ’, ‘ಪಿಟೀಲು ವಾದ್ಯ ಪ್ರವೀಣ’, ‘ಸಂಗೀತ ರತ್ನ’ ಮುಂತಾದ ಪುರಸ್ಕಾರಗಳು ಇವರಿಗೆ ಸಂದಿದೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ 2008-09 ರ ಸಾಲಿನ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಗಂಜಿಗುಂಟೆ ಗೆಳೆಯರ ಬಳಗದಿಂದ “ಗಾನ ಕಮಲ” ಎಂಬ ಬಿರುದು ಮತ್ತು ಸನ್ಮಾನಕ್ಕೆ ಭಾಜನರಾಗಿದ್ದಾರೆ.

 ಅವರ ಅಂತ್ಯಸಂಸ್ಕಾರವನ್ನು ಹೊಸಪೇಟೆ ಗ್ರಾಮದ ರುದ್ರಭೂಮಿಯಲ್ಲಿ ಗುರುವಾರ ನೆರವೇರಿಸಲಾಯಿತು.